ವಿಶ್ವ ಏಡ್ಸ್ ದಿನಾಚರಣೆಯ ಅಂಗವಾಗಿ ಸುಳ್ಯದ ತಾಲೂಕು ಮಟ್ಟದ ಏಡ್ಸ್ ಜಾಗೃತಿ ಕಾರ್ಯಕ್ರಮವು ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಏಡ್ಸ್ ತಡೆಗಟ್ಟುವಿಕೆ ಸಂಘ, ದ.ಕ ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಕಾನೂನು ಸೇವಾ ಪ್ರಾಧಿಕಾರ - ಸುಳ್ಯ ತಾಲೂಕು, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಸುಳ್ಯ, ಭಾರತೀಯ ವೈದ್ಯಕೀಯ ಸಂಘ - ಸುಳ್ಯ ಶಾಖೆ ಮತ್ತು ನೆಹರು ಸ್ಮಾರಕ ಮಹಾವಿದ್ಯಾಲಯ ಸುಳ್ಯದ ಸಹಯೋಗದಲ್ಲಿ ಡಿಸೆಂಬರ್ 2 ರಂದು ಸುಳ್ಯದ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸಭಾಂಗಣದಲ್ಲಿ ನಡೆಯಿತು.
ಏಡ್ಸ್ ರೋಗವನ್ನು ತಡೆಗಟ್ಟುವ ಹಾಗೂ ನಿಯಂತ್ರಿಸುವ ಕುರಿತು ಸುಳ್ಯದ ವೈದ್ಯರುಗಳಿಂದ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಏಡ್ಸ್ ಬಾಧಿತರನ್ನು ಸಮಾಜದಿಂದ ಬೇರ್ಪಡಿಸುವಂತಹ ಅನಾಗರಿಕ ಕ್ರಮಗಳನ್ನು ನಿರುತ್ಸಾಹಗೊಳಿಸುವ ಕುರಿತು ಕಾರ್ಯಕ್ರಮದಲ್ಲಿ ಜಾಗೃತಿ ಮೂಡಿಸಲಾಯಿತು.
ನೆಹರು ಸ್ಮಾರಕ ಮಹಾವಿದ್ಯಾಲಯ ಸುಳ್ಯದ ಎನ್‌ಸಿಸಿ ಘಟಕದ ಕೆಡೆಟ್‌ಗಳು, ಎನ್‌ಎಸ್‌ಎಸ್, ರೋವರ್ ಮತ್ತು ರೇಂಜರ್ಸ್ ಹಾಗೂ ಯುವ ರೆಡ್‌ಕ್ರಾಸ್ ಘಟಕಗಳ ಸ್ವಯಂಸೇವಕರು ಮತ್ತು ಉಪನ್ಯಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
No comments:
Post a Comment