ಸಂಪಾಜೆ ಗ್ರಾಮದ ಗೂನಡ್ಕ ಬೀಜದಕಟ್ಟೆಯ ಸಜ್ಜನ ಸಭಾಭವನದಲ್ಲಿ ನಡೆದ ಸುಳ್ಯ ತಾಲೂಕು 26ನೇ ಕನ್ನಡ ಸಾಹಿತ್ಯ ಸಮ್ಮೇಳನವು ದಿ.10/12/2022 ರಂದು ನಡೆಯಿತು. ಈ ಸಮಾರಂಭದಲ್ಲಿ ಎನ್ನೆಂಸಿ ಕಾಲೇಜಿನ ಎನ್.ಸಿ.ಸಿ. ಬ್ಯಾಂಡ್ ಸೆಟ್ ಟೀಮ್ ಪಾಲ್ಗೊಂಡಿದ್ದು ರಾಷ್ಟ್ರಪ್ರಶಸ್ತಿ ಪುರಸ್ಕೃತರಾದ ಶಿಕ್ಷಕ ಕೆ.ಆರ್. ಗಂಗಾಧರ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ್ದರು ಮತ್ತು ಎನ್ನೆಂಸಿ ಕಾಲೇಜಿನ ಕನ್ನಡ ಉಪನ್ಯಾಸಕ (ಸ್ಮರಣಸಂಚಿಕೆ ಸಂಪಾದಕ) ಸಂಜೀವ ಕುದ್ಪಾಜೆ ಅವರು ಕೂಡ ಈ ಸಮಾರಂಭದಲ್ಲಿ ಭಾಗಿಯಾಗಿದ್ದರು.
ಧ್ವಜಾರೋಹಣವನ್ನು ಸಂಪಾಜೆ ಗ್ರಾ.ಪಂ. ಅಧ್ಯಕ್ಷ ಜಿ.ಕೆ. ಹಮೀದ್, ಪರಿಷತ್‌ನ ಧ್ವಜಾರೋಹಣವನ್ನು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ| ಎಂ.ಪಿ. ಶ್ರೀನಾಥ್ ಮತ್ತು ಕನ್ನಡ ಧ್ವಜಾರೋಹಣವನ್ನು ಕಸಾಪ ಸುಳ್ಯ ಘಟಕದ ಅಧ್ಯಕ್ಷ ಚಂದ್ರಶೇಖರ ಪೇರಾಲ್ ನೆರವೇರಿಸಿದರು.
ಹಲವಾರು ಗಣ್ಯವ್ಯಕ್ತಿಗಳು ಭಾಗವಹಿಸಿದ್ದು ಸಮಾರಂಭದಲ್ಲಿ ನಮ್ಮ ಕಾಲೇಜಿನ ಕೆಡೆಟ್ಸ್ ಹಾಗೂ ಇತರ ಸಂಘದ ವರ್ಗದವರು ಮತ್ತು ಗ್ರಾಮದ ಜನರರು ಒಟ್ಟು ಸೇರಿ ಕಾರ್ಯಕ್ರಮವನ್ನು ಯಶಶ್ವಿಗೊಳಿಸುವಲ್ಲಿ ಸಫಲರಾಗಿದ್ದಾರೆ.
No comments:
Post a Comment